ರಾಮಮಂದಿರ ಉದ್ಘಾಟನೆಯಲ್ಲಿ ಸಿಪಿಐಎಂ ಭಾಗಿಯಾಗಲ್ಲ – News Kannada (ನ್ಯೂಸ್ ಕನ್ನಡ)

ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ಸಿಪಿಐಎಂನ ಯಾವುದೇ ನಾಯಕರು ಪಾಲ್ಗೊಳ್ಳುವುದಿಲ್ಲ ಎಂದು ಸಿಪಿಐಎಂ ನಾಯಕಿ ಬೃಂದಾ ಕಾರಟ್ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಕಾರಣವನ್ನೂ ಬಿಚ್ಟಿಟ್ಟಿದ್ದಾರೆ.

ಜನವರಿ 22 ರಂದು ಆಯೋಧ್ಯೆಯಲ್ಲಿನ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆಯಲ್ಲಿ ಸಿಪಿಐಎಂ ಪಕ್ಷ ಪಾಲ್ಗೊಳ್ಳುವುದಿಲ್ಲ. ಪಕ್ಷ ಇತರರ ಧಾರ್ಮಿಕ ನಂಬಿಕೆಯನ್ನು ಗೌರವಿಸುತ್ತದೆ. ಆದರೆ ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಬಿಜೆಪಿ ರಾಜಕೀಯದಿಂದ ನಾವು ತೆರಳುತ್ತಿಲ್ಲ ಎಂದು ಬೃಂದಾ ಕಾರಟ್ ಸ್ಪಷ್ಟಪಡಿಸಿದ್ದಾರೆ.

ರಾಮ ಮಂದಿರ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಧಾರ್ಮಿಕ ಭಾವನೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಧಾರ್ಮಿಕ ನಂಬಿಕೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಎಷ್ಟು ಸರಿ ಎಂದು ಬೃಂದಾ ಕಾರಟ್ ಹೇಳಿದ್ದಾರೆ. ಆದರೆ ಬೃಂದಾ ಕಾರಟ್ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಅಸರರು ದೇವಲೋಕ ಪ್ರವೇಶಿಸುವುದಿಲ್ಲ ಎಂದು ಜನ ಕಮೆಂಟ್ ಮಾಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *