ಮುಂಬೈ: ಜನವರಿ 22 ರಂದು ನಡೆಯಲಿರುವ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಶರದ್ ಪವಾರ್ಗೆ ಅಹ್ವಾನ ಪತ್ರ ನೀಡಿಲ್ಲ. ಇದರಿಂದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಪವಾರ್, ರಾಮ ಮಂದಿರ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ NCP ಮುಖ್ಯಸ್ಥ ಶರದ್ ಪವಾರ್ ಅವರು, ‘ರಾಮ ಮಂದಿರ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿಲ್ಲ. ರಾಮ ಮಂದಿರದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಆಡಳಿತ ಪಕ್ಷಕ್ಕೆ ಜನ ಬೆಂಬಲವಿಲ್ಲ. ಆ ಕಾರಣಕ್ಕಾಗಿ ರಾಮನ ಹೆಸರಿಟ್ಟು ಮುಂದಿನ ಚುನಾವಣೆ ನಡೆಸಲು ತಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇನ್ನು ಇಲ್ಲಿವರೆಗೆ ಪ್ರಧಾನಿ ಮೋದಿ ಸೇರಿ ಒಟ್ಟು 6,000ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆದರೆ ಇದರಲ್ಲಿ ಪವಾರ್ ಅವರನ್ನು ಆಹ್ವಾನಿಸಿಲ್ಲ ಎಂದು ತಿಳಿದು ಬಂದಿದೆ.