ರಾಮಮಂದಿರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಅನ್ಯ ಕೋಮಿನ ಧಾರ್ಮಿಕ ಕಟ್ಟಡಕ್ಕೆ ಹಾನಿ

ಧಾರವಾಡ: ಧಾರವಾಡ ಜಿಲ್ಲೆಯ ತಡಕೋಡು ಗ್ರಾಮದಲ್ಲಿ ಅಯೋಧ್ಯೆ ರಾಮ ಮಂದಿರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕರ ಗುಂಪೊಂದು ಧಾರ್ಮಿಕ ಕಟ್ಟಡವೊಂದನ್ನು ಭಾಗಶ:ವಾಗಿ ಹಾನಿ ಮಾಡಿರುವ ಘಟನೆ  ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಸದ್ದಾಂ ಹುಸೇನ್ (20) ವಿರುದ್ಧ ಜನವರಿ 21 ರಂದು ಧಾರವಾಡ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆತನೊಬ್ಬ ಮೆಕ್ಯಾನಿಕ್ ಎನ್ನಲಾಗಿದೆ.

ಈ ವಿಚಾರ ಬುಧವಾರ ರಾತ್ರಿ ಬೆಳಕಿಗೆ ಬಂದಿದ್ದು, ಕೋಮುಗಲಭೆಗೆ ಕಾರಣವಾಗಿತ್ತು. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಂಪು ಯುವಕನ ಮನೆಗೆ ನುಗ್ಗಲು ಯತ್ನಿಸಿದ್ದು, ಯಾವುದೇ ಅನಾಹುತ ನಡೆದಂತೆ ಪೊಲೀಸರು ತಡೆದಿದ್ದಾರೆ.

Font Awesome Icons

Leave a Reply

Your email address will not be published. Required fields are marked *