ರೈತರಿಗೆ ಸಾಲು ಸಾಲು ಅನ್ಯಾಯ ಎಸಗಿದ ಬಿಜೆಪಿಯನ್ನ ಯಾಕೆ ಬೆಂಬಲಿಸಬೇಕು..? ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ. – Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

kannada t-shirts

ಬೆಂಗಳೂರು,ಮಾರ್ಚ್,18,2024(www.justkannada.in):  ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು?  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಹಿನ್ನೆಲೆ ಪತ್ರಿಕಾ ಪ್ರಕಟಣೆ ಮೂಲಕ ಬಿಜೆಪಿ ವಿರುದ್ದ ಟೀಕಾಪ್ರಹಾರ ನಡೆಸಿರುವ ಸಿಎಂ ಸಿದ್ದರಾಮಯ್ಯ, ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು.  ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಕಿಡಿಕಾರಿದ್ದಾರೆ.

2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು? ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ?

ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು?

ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು. ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

Key words: BJP – PM Modi-injustice – farmers- CM -Siddaramaiah.

website developers in mysore

Font Awesome Icons

Leave a Reply

Your email address will not be published. Required fields are marked *