‘ಲೀಡರ್ ರಾಮಯ್ಯ’ ಬಯೋಪಿಕ್‌ನಲ್ಲಿ ವಿಜಯ್ ಸೇತುಪತಿ, ನಿರೂಪ್ ಭಂಡಾರಿ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನವನ್ನಾಧರಿಸಿ ಸಿನಿಮಾ ಮಾಡುವ ಬಗ್ಗೆ ಭಾರೀ ಚರ್ಚೆ ನಡೀತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಮಾಹಿತಿಯಿದೆ.

ಚಿತ್ರದಲ್ಲಿ ಸಿದ್ಧರಾಮಯ್ಯ ಪಾತ್ರದಲ್ಲಿ ತಮಿಳು ನಟ ವಿಜಯ್ ಸೇತುಪತಿ ನಟಿಸುವ ಬಗ್ಗೆ ಮಾತುಗಳು ಕೇಳಿಬರ್ತಿದೆ. ಗಂಗಾವತಿ ಹಯಾತ್ ಪೀರ್ ಸಾಬ್ ನೇತೃತ್ವದ ಎಮ್‌. ಎಸ್ ಕ್ರಿಯೇಷನ್ಸ್ ಬ್ಯಾನರ್‌ ಅಡಿಯಲ್ಲಿ ‘ಲೀಡರ್ ರಾಮಯ್ಯ’ ಹೆಸರಿನಲ್ಲಿ ಸಿನಿಮಾ ಮಾಡುವ ಪ್ರಯತ್ನ ನಡೀತಿದೆ. ಅಂದಾಜು 50 ಕೋಟಿ ರೂ. ಬಜೆಟ್‌ನಲ್ಲಿ 2 ಭಾಗಗಳಾಗಿ ಸಿಎಂ ಸಿದ್ದರಾಮಯ್ಯ ಜೀವನ ಚರಿತ್ರೆಯನ್ನು ಜನರ ಮುಂದಿಡುವ ಬಗ್ಗೆ ಸುದ್ದಿಯಾಗ್ತಿದೆ.

ನಿರ್ದೇಶಕ ಸತ್ಯರತ್ನಂ ಈಗಾಗಲೇ ಚಿತ್ರಕ್ಕಾಗಿ ಚಿತ್ರಕಥೆಯನ್ನು ಸಿದ್ಧಪಡಿಸಿದ್ದು ಕಲಾವಿದರ ಆಯ್ಕೆಯಲ್ಲಿ ತೊಡಗಿದ್ದಾರೆ. ಇನ್ನು ಚಿತ್ರದಲ್ಲಿ ಸಿದ್ದಾರಾಮಯ್ಯ ಅವರ ಯವ್ವನದ ದಿನಗಳಲ್ಲಿ ನಿರೂಪ್ ಭಂಡಾರಿ ನಟಿಸಲಿದ್ದಾರಂತೆ. ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಕೂಡ ಮಾಡಿದೆ. ಈ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದ್ದು, ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದರೆ, ಎರಡನೇ ಭಾಗದಲ್ಲಿ ಸಿದ್ದರಾಮಯ್ಯನವರ ಪಾತ್ರದಲ್ಲಿ ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರೆ ಎಂದು ಫಿಲ್ಮಿ ಮೂಲಗಳು ವರದಿ ಮಾಡಿದೆ.

Font Awesome Icons

Leave a Reply

Your email address will not be published. Required fields are marked *