News Kannada
ಚಾಮರಾಜನಗರ: ಲೋಕಸಭಾ ಚುನಾವಣೆ ಟಿಕೆಟ್ ಗಾಗಿ ವೈದ್ಯರೊಬ್ಬರು ತಮ್ಮ ಸರ್ಕಾರಿ ಹುದ್ದೆಯನ್ನು ತೊರೆದಿದ್ದಾರೆ. ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಬೆನ್ನುಹುರಿ ತಜ್ಞ ಹಾಗೂ ಪ್ರಾಧ್ಯಾಪಕ ಡಾ.ಎನ್.ಎಸ್.ಮೋಹನ್ ಅವರು ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಡಾ.ಎನ್.ಎಸ್.ಮೋಹನ್ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಳಿಯನಾಗಿದ್ದು, ಚಾಮರಾಜನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಸರ್ಕಾರಿ ವೈದ್ಯರಾಗಿ ಕೇವಲ 15 ವರ್ಷಗಳಾಗಿತ್ತು. ಇನ್ನೂ ಉನ್ನತ ಹುದ್ದೆಗೇರಲು ಸಾಕಷ್ಟು ಅವಕಾಶಗಳು ಇದ್ದವು. ಆದಾಗ್ಯೂ ರಾಜಕೀಯ ಆಸಕ್ತಿಯಿಂದಾಗಿ ಲಕ್ಷಾಂತರ ರೂಪಾಯಿ ವೇತನದ ಸರ್ಕಾರಿ ಹುದ್ದೆ ಬಿಟ್ಟು ಲೋಕಸಭಾ ಚುನಾವಣೆಗೆ ಧುಮುಕಿದ್ದಾರೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.
This site is protected by reCAPTCHA and the Google
Privacy Policy and
Terms of Service apply.
44