ಲೋಕಸಭೆ ಟಿಕೆಟ್ ಮಿಸ್..? ವಿದಾಯದ ಸಂದೇಶ ಬರೆದ ಸಂಸದ ಡಿ.ವಿ ಸದಾನಂದಗೌಡ – Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

kannada t-shirts

ಬೆಂಗಳೂರು,ಮಾರ್ಚ್,13,2024(www.justkannada.in):  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಲಿದೆ ಎನ್ನಲಾಗುತ್ತಿದೆ.

ಈ ಬಗ್ಗೆ ಸದಾನಂದಗೌಡರಿಗೆ ಬಿಜೆಪಿ ಹೈಕಮಾಂಡ್ ದೂರವಾಣಿ ಮೂಲಕ ಮಾಹಿತಿ ರವಾನಿಸಿದೆ ಎನ್ನಲಾಗಿದ್ದು ಈ ಬೆನ್ನಲ್ಲೆ ಟ್ವಿಟ್ಟರ್ ಮೂಲಕ ಡಿ.ವಿ ಸದಾನಂದಗೌಡರು ವಿದಾಯದ ಸಂದೇಶ ಬರೆದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಡಿ.ವಿ ಸದಾನಂದಗೌಡರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,

ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮೆ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿನ್ನ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Key words: Loksabha-election- ticket miss- MP -DV Sadanand Gowda

website developers in mysore

Font Awesome Icons

Leave a Reply

Your email address will not be published. Required fields are marked *