ಶಿವಮೊಗ್ಗ: ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಗುರುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈರಲ್ ವಿಡಿಯೋದಲ್ಲಿ ಶಾಲೆಯ ಕೆಲವು ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವುದು ಕಂಡುಬಂದಿದೆ. ಇದರಿಂದ ಪೋಷಕರು ಪ್ರತಿಭಟನೆ ನಡೆಸಿದರು. ಈ ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಶನಿವಾರ ಆರನೇ ತರಗತಿಯ ವಿದ್ಯಾರ್ಥಿಗಳಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಹೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮುಖ್ಯಶಿಕ್ಷಕರನ್ನು ವಿಚಾರಣೆಗೆ ಒಳಪಡಿಸಿದಾಗ, ವಿದ್ಯಾರ್ಥಿಗಳಿಗೆ ನೀರು ಹಾಕಲು ಮಾತ್ರ ಹೇಳಲಾಗಿತ್ತು, ಶೌಚಾಲಯ ಸ್ವಚ್ಛಗೊಳಿಸಲು ಹೇಳಿರಲಿಲ್ಲ ಎಂದಿದ್ದಾರೆ.