ವಿಶ್ವ ಕಂಡ ಅಪ್ರತಿಮ ಸ್ಪಿನ್ನರ್ ​‌ʼಮುತ್ತಯ್ಯ ಮುರಳೀಧರನ್ʼ ಬಯೋಪಿಕ್ ರಿಲೀಸ್‌ ಡೇಟ್‌ ಫಿಕ್ಸ್

ವಿಶ್ವ ಕಂಡ ಅಪ್ರತಿಮ ಸ್ಪಿನ್ನರ್​ಗಳಲ್ಲಿ ​ಮುತ್ತಯ್ಯ ಮುರಳೀಧರನ್ ಕೂಡ ಒಬ್ಬರು. ಶ್ರೀಲಂಕಾ ಪರ ಆಡಿದ್ದ ಅವರು, ಹಲವು ಸಾಧನೆ ಮಾಡಿದ್ದಾರೆ. ಅವರು ಬೌಲಿಂಗ್​ಗೆ ಇಳಿದರೆ ಎದುರಾಳಿಗಳು ನಡುಗುತ್ತಿದ್ದರು.

ಅವರ ಕುರಿತು ಈಗ ಬಯೋಪಿಕ್ ಸಿದ್ಧಗೊಳ್ಳುತ್ತಿದೆ. ಈ ಚಿತ್ರಕ್ಕೆ ‘800’ ಎಂದು ಶೀರ್ಷಿಕೆ ಇಡಲಾಗಿದೆ. ಬಹುಭಾಷೆಯಲ್ಲಿ ನಿರ್ಮಾಣ ಆಗಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಈ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಈ ಕುರಿತು ತಂಡ ಮಾಹಿತಿ ನೀಡಿದೆ.

‘800’ ಚಿತ್ರಕ್ಕೆ ಎಂ.ಎಸ್​. ಶ್ರೀಪತಿ ನಿರ್ದೇಶನದಲ್ಲಿ ಮಾಡಿದ್ದಾರೆ. ಗಿಬ್ರಾನ್​ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಸ್ಲಂ ಡಾಗ್​​ ಮಿಲಿಯನೇರ್​’ ಸಿನಿಮಾದಲ್ಲಿ ನಟಿಸಿದ್ದ ಮಧುರ್​ ಮಿತ್ತಲ್​ ‘800’ ಚಿತ್ರದಲ್ಲಿ ಮುಖ್ಯಭೂಮಿಕೆ ಮಾಡಿದ್ದಾರೆ.

ಮುತ್ತಯ್ಯ ಅವರ ಪತ್ನಿಯ ಪಾತ್ರಕ್ಕೆ ಮಹಿಮಾ ನಂಬಿಯಾರ್​ ನಟಿಸಿದ್ದಾರೆ. ತಮಿಳು, ತೆಲುಗು, ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ.

 

Font Awesome Icons

Leave a Reply

Your email address will not be published. Required fields are marked *