ಶೂಟಿಂಗ್ ವೇಳೆ ಅಪಘಾತ:ನಟ ವಿಷ್ಣು ಮಂಚುಗೆ ಗಂಭೀರ ಗಾಯ

ದೆಹಲಿ: ಡ್ರೋನ್ ಬಡಿದ ಪರಿಣಾಮ ನಟ ವಿಷ್ಣು ಮಂಚುಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ನ್ಯೂಜಿಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಹಸ ಸನ್ನಿವೇಶದಲ್ಲಿ ಈ ಅವಘಡ ಸಂಭವಿಸಿದ್ದು, ತೀವ್ರ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ ಚಿತ್ರಕ್ಕೆ ನ್ಯೂಜಿಲ್ಯಾಂಡ್‍ ನಲ್ಲಿ ಚಿತ್ರೀಕರಣ ಪ್ರಾರಂಭವಾಗಿತ್ತು. ಈ ಚಿತ್ರವು ವಿಷ್ಣು ಮಂಚು ಅವರ ಮಹತ್ವಾಕಾಂಕ್ಷೆಯ ಚಿತ್ರವಾಗಿದೆ. ಇಂಥದ್ದೊಂದು ಪೌರಾಣಿಕ ಚಿತ್ರದ ಭಾಗವಾಗಬೇಕು ಎಂಬುದು ಅವರ ಏಳು ವರ್ಷಗಳ ಕನಸಾಗಿತ್ತು. ಅದು ಶಿವ-ಪಾರ್ವತಿಯರ ಆಶೀರ್ವಾದದಿಂದ ಕೊನೆಗೂ ನನಸಾಗಿದೆ ಎಂದು ವಿಷ್ಣು ಹೇಳಿಕೊಂಡಿದ್ದರು.

Font Awesome Icons

Leave a Reply

Your email address will not be published. Required fields are marked *