ಶೆಟ್ಟರ್​ಗೆ ಬೆಳಗಾವಿ ಟಿಕೆಟ್​ ನೀಡದಂತೆ ಬಿಜೆಪಿ ನಾಯಕರ ಪಟ್ಟು

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಗೆ ಬೆಳಗಾವಿ ಲೋಕಸಭೆ ಟಿಕೆಟ್​ ನೀಡಬಾರದೆಂದು ಬೆಳಗಾವಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಜಗದೀಶ್​ ಶೆಟ್ಟರ್ ಅವರಿ​ಗೆ ಬಿಜೆಪಿ ಟಿಕೆಟ್ ನೀಡಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು, ಕೆಲ ಮುಖಂಡರ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಪ್ರಭಾಕರ್​ ಕೋರೆ ಮನೆಯಲ್ಲಿ ಶಾಸಕ ಅಭಯ್ ಪಾಟೀಲ್, ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಮಹಾಂತೇಶ ಕವಟಗಿಮಠ, ಎಂ‌.ಬಿ.ಜಿರಲೆ ಸಭೆ ಸೇರಿದ್ದರು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕಡಾಡಿ ನೇತೃತ್ವದಲ್ಲಿ ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದಾರೆ. ಇನ್ನೇರಡು ದಿನಗಳಲ್ಲಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಸ್ಥಳೀಯರಿಗೆ ಟಿಕೆಟ್ ಕೊಡಿ ಅಂತ ನಾಯಕರು ಮನವಿ ಮಾಡಲಿದ್ದಾರೆ. ಇಂದು (ಮಾ.17) ಮಧ್ಯಾಹ್ನ ಒಂದು ಬಾರಿ ಸಭೆ ಸೇರಿ ಫೈನಲ್ ಮಾಡಲು ತೀರ್ಮಾನಿಸಿದ್ದಾರೆ. ಜಗದೀಶ್ ಶೆಟ್ಟರ್​ಗೆ ಟಿಕೆಟ್ ನೀಡಿದರೆ ಪರಿಣಾಮ ಬೇರೆ ಆಗುತ್ತದೆ. ಅಸಮಾಧಾನ ಭುಗಿಲೇಳುತ್ತೆ ಎಂದು ಕೇಂದ್ರ ನಾಯಕರಿಗೆ ಮನವರಿಕೆ ಮಾಡಲಿದ್ದಾರೆ.

ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದ್ರೆ, ಇತ್ತೀಚೆಗೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆಗೂ ಮುನ್ನವೇ ಅವರು ಬೆಳಗಾವಿ ಅಥವಾ ಹುಬ್ಬಳ್ಳಿ-ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಡಬೇಕೆಂದು ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತಿದೆ.

Font Awesome Icons

Leave a Reply

Your email address will not be published. Required fields are marked *