ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಗಳಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಇದರಿಂದಾಗಿ ಇಬ್ಬರೂ ನಾಯಕರಿಗೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಿಲೀಫ್ ಸಿಕ್ಕಿದ್ದು, ಬಂಧನ ಭೀತಿಯಿಂದ ಪಾರಾಗಿದ್ದಾರೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಸಮಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಸಂಬಂಧ ಹಾಗೂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿಗೆ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ಮತ್ತು ಅದೇ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆಯಾಗಿದೆ ಎಂದು ಕಾಟನ್ ಪೇಟೆ ಪೊಲೀಸರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೂಡಿದ್ದ ಪ್ರಕರಣದಲ್ಲಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಎರಡೂ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ರಾಜಕಾರಣಿಗಳು ಆಡುವ ಮಾತಿನ ಮೇಲೆ ನಿಗಾ ಇರಬೇಕು ಎಂದು ಆದೇಶಿಸಿದೆ.