ಶ್ರೀರಾಮುಲು ಸಹೋದರಿ ಮಾಜಿ‌ ಸಂಸದೆ ಜೆ.ಶಾಂತಾ ವೈಎಸ್‌ಆರ್‌ ಕಾಂಗ್ರೆಸ್‌ ಗೆ ಸೇರ್ಪಡೆ

ಬಳ್ಳಾರಿ: ಮಾಜಿ ಸಚಿವ ಶ್ರೀರಾಮುಲು ಸಹೋದರಿ, ಮಾಜಿ‌ ಸಂಸದೆ ಜೆ.ಶಾಂತಾ  ಅವರು ವಿಜಯವಾಡದಲ್ಲಿ ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ರೆಡ್ಡಿ ಸಮ್ಮುಖದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು.

ಬಳ್ಳಾರಿ ಜಿಲ್ಲೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾಂತಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದೂಪುರ ಲೋಕಸಭಾ ಕ್ಷೇತ್ರದಲ್ಲಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

ಅನಂತಪುರಂ ಜಿಲ್ಲೆಯ ಗುಂತಕಲ್ ಪಟ್ಟಣದ ನಿವಾಸಿಯಾಗಿರುವ ಜೆ.ಶಾಂತಾ ಅವರು 2009 ರಲ್ಲಿ ಶ್ರೀರಾಮುಲು ಸಹಕಾರದಿಂದ ಬಳ್ಳಾರಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಶಾಂತಾ ಅವರು ವಾಲ್ಮೀಕಿ ಸಮುದಾಯದವರಾಗಿದ್ದು, ಹಿಂದೂಪುರ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ 4.5 ಲಕ್ಷ ಮತದಾರರಿದ್ದಾರೆ.

Font Awesome Icons

Leave a Reply

Your email address will not be published. Required fields are marked *