ಸಕಲೇಶಪುರ ಪೊಲೀಸ್​ ಕ್ವಾರ್ಟರ್ಸ್​ನಲ್ಲಿ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್

ಹಾಸನ: ಓರ್ವ ಕಾನ್ಸ್​ಟೇಬಲ್​ ಸಕಲೇಶಪುರದ ಪೊಲೀಸ್​ ಕ್ವಾರ್ಟರ್ಸ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಮೃತ ಕಾನ್ಸ್​ಟೇಬಲ್​ ಸೋಮಶೇಖರ್ (39) ಎಂದು ತಿಳಿದು ಬಂದಿದೆ. ಇವರು ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಊಹಿಸಲಾಗಿದೆ.

ಈ ಪ್ರಕರಣ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *