ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದ ಉದಯನಿಧಿ ಸ್ಟಾಲಿನ್

ನವದೆಹಲಿ: ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಆ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಮತ್ತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ ಆದರೆ ಅದನ್ನು ನಿರ್ಮೂಲನೆ ಮಾಡಲೇಬೇಕು ಎಂದು ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿದ್ದಾರೆ. ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದು, ತಮಿಳುನಾಡು ಸಚಿವ ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಹಲವರು ಕರೆ ನೀಡಿದ್ದಾರೆ.

“ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್’ ಎಂದು ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ನಾಯಕ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ಕಾಂಗ್ರೆಸ್‌ನ ಮೌನವು ಪರೋಕ್ಷವಾಗಿ ಸ್ಟಾಲಿನ್‌ ಹೇಳಿಕೆಯನ್ನು ಬೆಂಬಲಿಸುವಂತಿದೆ ಎಂದು ಬಿಜೆಪಿಯ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ಉದಯನಿಧಿ ಸ್ಟಾಲಿನ್ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕ್ರೈಸ್ತ ಮಿಷನರಿಗಳ ಪ್ರತಿನಿಧಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

“ಗೋಪಾಲಪುರಂ ಕುಟುಂಬದ ಏಕೈಕ ಸಂಕಲ್ಪವೆಂದರೆ ರಾಜ್ಯದ ಜಿಡಿಪಿಯನ್ನು ಮೀರಿ ಸಂಪತ್ತನ್ನು ಸಂಗ್ರಹಿಸುವುದು. ತಿರು ಉದಯನಿಧಿ ಸ್ಟಾಲಿನ್, ಕ್ರೈಸ್ತ ಮಿಷನರಿಗಳ ಮುಖವಾಣಿಯಾಗಿದ್ದೀರಿ. ರಾಜ್ಯದಲ್ಲಿ ಆ ಮಿಷನರಿಗಳ ಆಲೋಚನೆಯನ್ನು ಬೆಳೆಸುವುದು ನಿಮ್ಮ ಉದ್ದೇಶ ಎಂದು ಎಕ್ಸ್‌ ನಲ್ಲಿ ಬರೆದುಕೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *