ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಸಿನಿಮಾ ಸೆಪ್ಟಂಬರ್ 28ಕ್ಕೆ ರಿಲೀಸ್ ಆಗಲಿದೆ ಎಂದು ಈ ಹಿಂದೆಯೇ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು ಘೋಷಣೆ ಮಾಡಿತ್ತು. ಆದರೆ, ಇದೀಗ ಅನಿವಾರ್ಯ ಕಾರಣಗಳಿಂದಾಗಿ ಅಂದು ಸಿನಿಮಾವನ್ನು ಬಿಡುಗಡೆ ಮಾಡಲು ಆಗುತ್ತಿಲ್ಲವೆಂದು ಘೋಷಣೆ ಮಾಡಿದೆ.
ಸಿನಿಮಾ ಬಿಡುಗಡೆ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಹೊಂಬಾಳೆ ಫಿಲ್ಮಸ್, ನಾವು ಅತ್ಯುತ್ತಮವಾದ ಸಿನಿಮಾವನ್ನು ಕೊಡಲು ಸಿದ್ಧವಾಗುತ್ತಿದ್ದೇವೆ. ನಾನಾ ಕಾರಣಗಳಿಂದಾಗಿ ಸೆ.28ರಂದು ಸಿನಿಮಾ ಬಿಡುಗಡೆ ಮಾಡಲು ಆಗುತ್ತಿಲ್ಲ.
ನಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸುತ್ತೇವೆ. ಬಿಡುಗಡೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು’ ಎಂದು ಬರೆದುಕೊಂಡಿದ್ದಾರೆ.