ಸಹೋದರನಿಗೆ ಜಾಮೀನು : ನ್ಯಾಯಾಧೀಶರಿಗೆ ಧನ್ಯವಾದ ಎಂದ ಪ್ರತಾಪ್ ಸಿಂಹ

ಮೈಸೂರು: ವಿಕ್ರಂ ಸಿಂಹಗೆ ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ನ್ಯಾಯಾಧೀಶರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ನನ್ನ ತಮ್ಮ ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ಮಾಡಿಲ್ಲ. ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಕರೆಗಳ ಮೂಲಕ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ, ಮಾಧ್ಯಮ ಮಿತ್ರರಿಗೂ ಧನ್ಯವಾದಗಳು ಎಂದು ಎಕ್ಸ್ ಖಾತೆಯಲ್ಲಿ ಪ್ರತಾಪ್ ಸಿಂಹ ಬರೆದುಕೊಂಡಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *