ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆಗೆ ಶರಣಾದ ಯೋಧ

ಇಂಫಾಲ್: ಅಸ್ಸಾಂ ರೈಫಲ್ಸ್‌ನ ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಮಣಿಪುರದ ಎಆರ್ ಬೆಟಾಲಿಯನ್ ಆವರಣದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಯೋಧರಿಗೆ ಗಾಯಗಳಾಗಿದ್ದು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಡು ಹಾರಿಸಿದ್ದು ಕಲಹ ಪೀಡಿತ ಮಣಿಪುರದ ಚುರಾಚಂದ್‍ಪುರ ಮೂಲದ ಯೋಧ ಎಂದು ತಿಳಿದುಬಂದಿದೆ. ಗುಂಡಿನ ದಾಳಿಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *