ಸಿದ್ದರಾಮಯ್ಯ ಅವಧಿಯಲ್ಲಿ ರಾಷ್ಟ್ರ ವಿರೋಧಿಗಳು ಬೀದಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ- ಕೋಟ

ದಾವಣಗೆರೆ: ಸಿದ್ದರಾಮಯ್ಯ ಅವಧಿಯಲ್ಲಿ 50 ಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲ. ರಾಷ್ಟ್ರ ವಿರೋಧಿಗಳು, ಭಯೋತ್ಪಾದಕರು ಬೀದಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಅವರು ಇಂದು ದಾವಣಗೆರೆಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಹಾಗೂ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ವಿಚಾರದ ಬಗ್ಗೆ ಮಾತನಾಡಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಆರೋಪಿಯನ್ನು ಬಂಧಿಸಿಲ್ಲ. ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಆಗದೇ ಇರುವ ಕೃತ್ಯ ವಿಧಾನಸೌಧದಲ್ಲಿ ನಡೆದಿದೆ. ಎಫ್​ಎಸ್​ಎಲ್ ವರದಿ ಬಂದರೂ ಕಾಂಗ್ರೆಸ್ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಇದನ್ನು ಪ್ರಶ್ನಿಸಿದ ಮಾಧ್ಯಮದವರನ್ನು ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆದರಿಸಿದ್ದಾರೆ ಎಂದು ಹೇಳಿದರು.

ವಿಧಾನಸೌಧದಲ್ಲೇ ಇಂತಹ ಕೃತ್ಯ ನಡೆದಿದ್ದರೂ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಹೇಗೆ ದೇಶದ ಜನರನ್ನು ಕಾಪಾಡುತ್ತಾರೆ. ಬಾಯಿ ತೆಗೆದರೆ ಸಂವಿಧಾನ ರಕ್ಷಣೆ ಬಗ್ಗೆ ಕಾಂಗ್ರೆಸ್​ನವರು ಮಾತಾಡುತ್ತಾರೆ. ಆದರೆ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದೇ ಕಾಂಗ್ರೆಸ್. ಈಗ ಸಂವಿಧಾನಕ್ಕೆ ಧಕ್ಕೆ ಆಗಿದೆ ಅಂತಾ ಸಂವಿಧಾನ ಜಾಗೃತಿ ಜಾಥಾ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Font Awesome Icons

Leave a Reply

Your email address will not be published. Required fields are marked *