ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ. ವರಾಳೆ ಹೆಸರು ಶಿಫಾರಸ್ಸು

ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರ ಹೆಸರನ್ನು ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಶೀಘ್ರವೇ ಪ್ರಸನ್ನ ಬಿ.ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕವಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್​ನ ಹಾಲಿ 2ನೇ ಹಿರಿಯ ನ್ಯಾಯಮೂರ್ತಿಯಾಗಿರುವ ದಿನೇಶ್ ಕುಮಾರ್ ಅವರು ಫೆ.24ರಂದು ನಿವೃತ್ತಿಯಾಗಲಿದ್ದಾರೆ. ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಪದೋನ್ನತಿ ನಂತರ ದಿನೇಶ್ ಕುಮಾರ್ ಅವರು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ನೇಮಕಗೊಳ್ಳಲಿದ್ದಾರೆ.

ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು 2022ರ ಅಕ್ಟೋಬರ್ 11ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು.

Font Awesome Icons

Leave a Reply

Your email address will not be published. Required fields are marked *