ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಮನೆ ಖರೀದಿಸಿದ ಅದಾ ಶರ್ಮಾ

ಮುಂಬೈ:  ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಹಿಟ್ ಆದ ಕಾರಣದಿಂದ ನಟಿ ಅದಾ ಶರ್ಮಾ ಸಾಕಷ್ಟು ಸುದ್ದಿ ಆದರು.

ಈಗ ಅವರು ಮತ್ತೊಂದು ವಿಶೇಷ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಸಾಯುವಾಗ ಉಳಿದುಕೊಂಡಿದ್ದ ಮನೆಯನ್ನು ಅವರು ಖರೀದಿ ಮಾಡಿದ್ದಾರೆ.

ಮುಂಬೈನ ಮೋಂಟ್ ಬ್ಲ್ಯಾಂಕ್ ಅಪಾರ್ಟ್​ಮೆಂಟ್​ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರು ವಾಸ ಮಾಡುತ್ತಿದ್ದರು. 2020ರ ಜೂನ್ 14ರಂದು ಅವರು ನಿಧನ ಹೊಂದಿದರು. ಇದಾದ ಬಳಿಕ ಈ ಫ್ಲ್ಯಾಟ್ ಖಾಲಿಯೇ ಉಳಿದಿತ್ತು. ಯಾರೊಬ್ಬರೂ ಈ ಮನೆಯಲ್ಲಿ ಉಳಿದುಕೊಳ್ಳಲು ಮುಂದೆ ಬಂದಿರಲಿಲ್ಲ. ಹೀಗಾಗಿ, ಇದರ ಮಾಲೀಕರು ಈ ಅಪಾರ್ಟ್​ಮೆಂಟ್​ನ ಮಾರುವ ನಿರ್ಧಾರಕ್ಕೆ ಬಂದಿದ್ದರು. ನಂತರ ಅದಾ ಶರ್ಮಾ ಅವರನ್ನು ಇದನ್ನು ಖರೀದಿ ಮಾಡಿದ್ದಾರೆ.

ಈ ವಿಚಾರದಲ್ಲಿ ಮೌನ ವಹಿಸಿದ್ದ ಅವರು ಆ ಬಗ್ಗೆ ಮಾತನಾಡಿದ್ದಾರೆ. ‘ನಾನು ಎಲ್ಲರ ಹೃದಯದಲ್ಲಿ ವಾಸಿಸುತ್ತಿದ್ದೇನೆ. ಮಾತನಾಡಲು ಇದು ಸರಿಯಾದ ಸಮಯ. ನಾನು ಆ ಮನೆ ನೋಡಲು ಹೋದಾಗ ಮಾಧ್ಯಮದ ಗಮನ ಸಂಪೂರ್ಣವಾಗಿ ನನ್ನ ಮೇಲೆ ಇತ್ತು. ನಾನು ಖಾಸಗಿ ವಿಚಾರವನ್ನು ನನ್ನಲ್ಲೇ ಇಟ್ಟುಕೊಳ್ಳಲು ಬಯಸುವ ವ್ಯಕ್ತಿ. ನನ್ನ ಸಿನಿಮಾಗಳಿಗಾಗಿ ಮಾತ್ರ ಸುದ್ದಿಯಲ್ಲಿ ಇರಲು ಬಯಸುತ್ತೇನೆ. ನಾನು ಉಳಿದ ವಿಚಾರಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳಲು ಇಷ್ಟಪಡುತ್ತೇನೆ’ ಎಂದಿದ್ದಾರೆ ಅವರು.

ಸುಶಾಂತ್ ಸಿಂಗ್ ಮೃತಪಟ್ಟ ಬಳಿಕ ಅವರ ಬಗ್ಗೆ ಕೆಲವರು ತಪ್ಪಾಗಿ ಮಾತನಾಡಿದ್ದರು. ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದೆಲ್ಲ ಹೇಳಿದ್ದರು. ಈ ವಿಚಾರ ಕೇಳಿ ಅದಾ ಶರ್ಮಾಗೆ ಬೇಸರ ಆಗಿತ್ತಂತೆ. ‘ಈ ಜಗತ್ತಿನಲ್ಲಿ ಇಲ್ಲದ ವ್ಯಕ್ತಿಯ ಬಗ್ಗೆ ಮಾತನಾಡುವುದು ತಪ್ಪು ಎಂದು ನಾನು ಭಾವಿಸಿದೆ. ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಹೀಗಾಗಿ, ನಾನು ಆ ಮನೆ ಖರೀದಿಸಿದೆ. ಅವರ ಬಗ್ಗೆ ಮಾಡಿದ ಕೆಲವು ಕಮೆಂಟ್​ಗಳನ್ನು ನೋಡಿದೆ. ನನ್ನನ್ನು ಟ್ರೋಲ್ ಮಾಡಿ. ಆದರೆ, ಜಗತ್ತಿನಲ್ಲಿ ಇಲ್ಲದ ಆ ವ್ಯಕ್ತಿ ಬಗ್ಗೆ ಮಾತನಾಡಬೇಡಿ’ ಎಂದು ಕೋರಿದ್ದಾರೆ ಅವರು.

Font Awesome Icons

Leave a Reply

Your email address will not be published. Required fields are marked *