ಸೂಪರ್‌ ಸ್ಟಾರ್‌ ರಜನಿಗೆ 100 ಕೋಟಿ ರೂ. ಗಿಫ್ಟ್‌

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ದೇಶದೆಲ್ಲೆಡೆ ಯಶಸ್ವಿ ಪ್ರದರ್ಶನ ಕಂಡು 600 ಕೋಟಿ ರೂ.ಗೂ ಹೆಚ್ಚು ಗಳಿಕೆ ಮಾಡಿದೆ. ಇದೇ ಕಾರಣಕ್ಕೆ ಜೈಲರ್‌ ಸಿನಿಮಾ ನಿರ್ಮಿಸಿರುವ ಸನ್ ಪಿಕ್ಚರ್ಸ್ ಮಾಲೀಕರು ಆದ ಕಲಾನಿಧಿ ಮಾರನ್ ಅವರು ರಜನಿಕಾಂತ್ ಅವರಿಗೆ 100 ಕೋಟಿ ರೂಪಾಯಿ ಉಡುಗೊರೆ ರೂಪದ ಚೆಕ್ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತ ಫೋಟೋವೊಂದನ್ನು ಸನ್ ಟ್ವೀಟರ್ ನಲ್ಲಿ ಹಂಚಿಕೊಂಡಿದೆ.

ಅಲ್ಲದೇ, ಸನ್ ಪಿಕ್ಚರ್ಸ್ ಸಂಸ್ಥೆಯಿಂದ ರಜನಿಕಾಂತ್ ಅವರಿಗೆ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರನ್ನು ಸಹ ಉಡುಗೊರೆಯಾಗಿ ನೀಡಲಾಗಿದೆ. ಇದರ ವಿಡಿಯೋವನ್ನು ನಿರ್ಮಾಣ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

Font Awesome Icons

Leave a Reply

Your email address will not be published. Required fields are marked *