ಸೆ.1ರಂದು ಮೈಸೂರು ದಸರಾ ಗಜಪಯಣಕ್ಕೆ ಚಾಲನೆ. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಮೈಸೂರು,ಆಗಸ್ಟ್,30,2023(www.justkannada.in): ಸೆಪ್ಟೆಂಬರ್ 1 ರಂದು ಬೆಳಗ್ಗೆ 9.45 ಕ್ಕೆ ಮೈಸೂರು ದಸರಾ ಗಜ ಪಯಣ – 2023 ಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪ ಅವರು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡುವರು. ದಸರಾ-2023 ರ ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕ ಬಿಡುಗಡೆಯನ್ನು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ನೆರವೇರಿಸಲಿದ್ದು, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ ಡಿ ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಪಶುಸಂಗೋಪನೆ ಇಲಾಖೆ ಮತ್ತು ರೇಷ್ಮೆ ಇಲಾಖೆಯ ಸಚಿವ ಕೆ ವೆಂಕಟೇಶ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಸಂಗಪ್ಪ ತಂಗಡಗಿ ಅವರ ಘನ ಉಪಸ್ಥಿತಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರ ಶಿವಕುಮಾರ್, ಸಂಸದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಶಾಸಕರಾದ ತನ್ವೀರ್ ಸೇಠ್, ಜಿ ಟಿ ದೇವೇಗೌಡ, ಅನಿಲ್ ಕುಮಾರ್ ಸಿ, ರವಿಶಂಕರ್ ಡಿ, ದರ್ಶನ್ ಧ್ರುವನಾರಾಯಣ್, ಟಿ.ಎಸ್ ಶ್ರೀವತ್ಸ, ಕೆ ಹರೀಶ್ ಗೌಡ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮರೆತಿಬ್ಬೇಗೌಡ, ಅಡಗೂರು ಹೆಚ್ ವಿಶ್ವನಾಥ್, ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ ಮಧು ಜಿ ಮಾದೇಗೌಡ ಹಾಗೂ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಅಂಬಿಕಾ ಲೋಕೇಶ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Key words: Mysore Dasara-2023-Gajapayana – September 1

Font Awesome Icons

Leave a Reply

Your email address will not be published. Required fields are marked *