ಕೇರಳ: ಸೊಸೆಯ ಕತ್ತು ಸೀಳಿ ಬಳಿಕ ಮಾವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ವಡಕೇಕರ ಎಂಬ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಸಮಸ್ಯೆಯಿಂದ ಸೆಬಾಸ್ಟಿಯನ್ ಎಂಬ ವ್ಯಕ್ತಿ ತನ್ನ ಸೊಸೆ ಶಾನು ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ.
ಮಾವ ಸೆಬಾಸ್ಟಿಯನ್ ಸೊಸೆಯ ಕುತ್ತಿಗೆಯನ್ನು ಸೀಳಿದ್ದ ಪರಿಣಾಮ ಶಾನು ರವರ ಕುತ್ತಿಗೆಯಿಂದ ರಕ್ತ ಸುರಿಯುತ್ತಿತ್ತು. ತಕ್ಷಣವೇ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಮನೆಗೆ ಬಂದು ನೋಡುವಷ್ಟರಲ್ಲಿ ಮಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದರು.
ಘಟನೆಯ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸೆಬಾಸ್ಟಿಯನ್ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮತ್ತೊಂದೆಡೆ ಸೊಸೆಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಅಕ್ಕಪಕ್ಕದ ಮನೆಯವರಲ್ಲಿ ಸೆಬಾಸ್ಟಿಯನ್ ರವರ ಕುಟುಂಬದ ಬಗ್ಗೆ ವಿಚಾರಿಸಿದಾಗ ಸೆಬಾಸ್ಟಿಯನ್ ಮತ್ತು ಶಾನು ನಡುವೆ ಯಾವಾಗಲೂ ಜಗಳಗಳು ನಡೆಯುತ್ತಿತ್ತು ಎಂಬ ಮಾಹಿತಿಯನ್ನು ತಿಳಿಸಿದ್ದಾರೆ. ಘಟನೆ ನಡೆದ ದಿನ ಶಾನು ಅವರ ಪತಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಶಾನು ಮೆದು ಧ್ವನಿಯಲ್ಲಿ ಮಾವ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಆಕೆ ಹೇಳಿದ್ದಳು. ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಿತಿ ಸುಧಾರಿಸಿದ ಬಳಿಕವೇ ಹೇಳಿಕೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.