‘ಸೌಜನ್ಯ’ಗೆ ನ್ಯಾಯ ಸಿಗದೆ ಮಂಜುನಾಥನ ದರ್ಶನ ಮಾಡಲ್ಲ ಎಂದ ದುನಿಯಾ ವಿಜಯ್

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ ರಾಜ್ಯ ಮಾತ್ರವಲ್ಲ ದೇಶಲ್ಲಿಯೇ ಸುದ್ದಿಯಾಗಿದೆ. ಅಷ್ಟರಮಟ್ಟಿಗೆ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದ ಪ್ರಕರಣ ಇದಾಗಿದ್ದು ಇದರ ಬಗ್ಗೆ ಸಾಕಷ್ಟು ಟೀಕೆ ಕೂಡಾ ಕೇಳಿ ಬಂದಿದೆ. ಇದೀಗ ಸ್ಯಾಂಡಲ್​ವುಡ್ ನಟ, ದುನಿಯಾ ವಿಜಯ್ ಕೂಡಾ ಔಜನ್ಯ ಕೇಸ್​ ಬಗ್ಗೆ ಪ್ರತಿಕ್ರಿಯಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್​ಬುಕ್​ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. “ಪ್ರತಿವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ. ಹೆಚ್ಚು ಸಮಯ ಮರೆಮಾಚಲಾಗದು-ಬುದ್ಧ” ಎಂದು ನಟ ಫೇಸ್​ಬುಕ್​ನಲ್ಲಿ ಬರೆದಿದ್ದಾರೆ.

ನಟನ ಈ ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಹಳ್ಳಿಗಳಲ್ಲಿಯೂ ಜನರು ಸೌಜನ್ಯ ಪರ ಧ್ವನಿ ಎತ್ತುತ್ತಿದ್ದಾರೆ. ಇದಲ್ಲದೆ ಬಹಳಷ್ಟು ಜನರು ಸೋಷಿಯಲ್ ಮೀಡಿಯಾದಲ್ಲಿ ಜಸ್ಟೀಸ್ ಫಾರ್ ಸೌಜನ್ಯ ಎಂದ ಹ್ಯಾಶ್​ಹ್ಯಾಗ್​ಗಳನ್ನು ಟ್ರೆಂಡ್ ಮಾಡುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *