ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯಾತೀಗಣ್ಯರು. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಬೆಂಗಳೂರು,ಆಗಸ್ಟ್,9,2023(www.justkannada.in):   ಕಳೆದ ಎರಡು ದಿನದ ಹಿಂದೆ ಹೃದಯಾಘಾತದಿಂದ ನಿಧನರಾದ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನ ನಿನ್ನೆ ರಾತ್ರಿ ಬೆಂಗಳೂರಿಗೆ ತರಲಾಗಿದ್ದು ಅಂತಿಮ ದರ್ಶನಕ್ಕೆ ಸ್ಪಂದನಾ ತಂದೆ ಬಿ.ಕೆ.ಶಿವರಾಂ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದೆ.

ಚಿತ್ರರಂಗದ ಕಲಾವಿದರು, ರಾಜಕೀಯ ಗಣ್ಯರು ಆಗಮಿಸಿ ಸ್ಪಂದನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಟ ರಾಘವೇಂದ್ರ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್,  ನಟಿ ಸುಧಾರಾಣಿ ಕುಟುಂಬ, ಗಾಯಕ ವಿಜಯ ಪ್ರಕಾಶ್, ನಟ ಕೋಮಲ್, ಹಿರಿಯ ನಟ ಶ್ರೀನಾಥ್, ಹಿರಿಯ ನಟಿ ಗಿರಿಜಾ ಲೋಕೇಶ್, ನಟ ಶರಣ್ ಸ​​​ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದರು.

ಸಚಿವ ಪ್ರಿಯಾಂಕ್ ಖರ್ಗೆ, ವಿಧಾನಸಭೆ ಸಭಾಪತಿ ಯು.ಟಿ.ಖಾದರ್,  ವಿಕ್ರಮ್ ಸೂರಿ, ಪತ್ನಿ, ಹಿರಿಯ ನಟ, ನಿರ್ಮಾಪಕ ಅರವಿಂದ್​ ಸ್ಪಂದನಾ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಅಂತಿಮ ದರ್ಶನದ ಬಳಿಕ ಮಾತನಾಡಿದ ನಟ ರಾಘವೇಂದ್ರ ರಾಜ್​ಕುಮಾರ್ , ಹೇಗೆ ರಿಯಾಕ್ಟ್ ಮಾಡಬೇಕು ನನಗೆ ತಿಳಿಯುತ್ತಿಲ್ಲ. ಸ್ಪಂದನಾ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ನಟ ವಿಜಯ​ರಾಘವೇಂದ್ರರನ್ನು ನೋಡುವುದಕ್ಕೆ ಕಷ್ಟ ಆಗುತ್ತೆ ಎಂದು ಹೇಳಿದರು.

Key words: Bangalore-final darshan – Vijayaraghavendra wife-Spandana- mortal body.

Font Awesome Icons

Leave a Reply

Your email address will not be published. Required fields are marked *