ಬೆಂಗಳೂರು: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.