ಹಂಚಲು ಸಂಗ್ರಹಿಸಿದ್ದ 80ಕ್ಕೂ ಹೆಚ್ಚು ಕುಕ್ಕರ್​ಗಳನ್ನು ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್​ನ 22ನೇ ವಾರ್ಡ್​ನಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 80ಕ್ಕೂ ಹೆಚ್ಚು ಕುಕ್ಕರ್​ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕುಕ್ಕರ್​ಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ರಂಗನಾಥ್ ಭಾವಚಿತ್ರವಿರುವ ಕುಕ್ಕರ್​ಗಳನ್ನು ಜಪ್ತಿ ಮಾಡಲಾಗಿದೆ.

ಜೆಡಿಎಸ್ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಮಲ್ಲಿಪಾಳ್ಯದ ಬೆಟ್ಟಸ್ವಾಮಿಗೆ ಸೇರಿದ ಟಿಸಿ ರಿಪೇರಿ ಮಾಡುವ ಗೋದಾಮಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು.

ಸಂಸದ ಡಿ.ಕೆ.ಸುರೇಶ್​ರಿಂದ ಈ ಕುಕ್ಕರ್​ಗಳನ್ನು ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *