ಬೆಂಗಳೂರು: ರಾಜ್ಯಾದ್ಯಂತ ಮೈಕೊರೆಯುವ ಚಳಿ ಮುಂದುವರೆದಿದ್ದು ಅದರ ಜೊತೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಒಣಹವೆ ಮುಂದುವರೆಯಲಿದೆ.