ಇಟಲಿ: ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಬುಧವಾರ (ನ.1) ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ಕಳೆದ ದಿನ (ನ.1) ಹಸೆಮಣೆ ಏರಿದ್ದಾರೆ. ಈ ಮದುವೆಯಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು. ಮದುವೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವ ದಂಪತಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.
ಇನ್ನು ಮೆಗಾಸ್ಟಾರ್ ಚಿರಂಜೀವಿ ಶೇರ್ ಮಾಡಿರುವ ಹೊಸ ಫೋಟೋ ಇದೀಗ ವೈರಲ್ ಆಗುತ್ತಿದೆ. ವರುಣ್ ತೇಜ್ ಹಾಗೂ ಲಾವಣ್ಯ ಮದುವೆಯಲ್ಲಿ ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಮ್ ತೇಜ್, ಅಲ್ಲು ಸಿರಿಶ್, ಪವನ್ ಕಲ್ಯಾಣ್, ಚಿರಂಜೀವಿ ಮೊದಲಾದವರು ಹಾಜರಿ ಹಾಕಿದ್ದಾರೆ. ಈ ಫೋಟೋನ ಚಿರಂಜೀವಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನವದಂಪತಿಗೆ ಶುಭ ಹಾರೈಸಿದ್ದಾರೆ.