ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ !

ಹಾಸನ: ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.ಆಸ್ಪತ್ರೆಯ ಎಕ್ಸರೇ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಹಾಸನ ನಗರದ ಶಂಕರ ಮಠ ರಸ್ತೆಯಲ್ಲಿರುವ ಮಂಜುನಾಥ್ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಹಾಸನದ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.ಕೂಡಲೇ ಕುಟುಂಬಸ್ಥರು ತಮ್ಮ ರೋಗಿಗಳನ್ನು ಹೊರ ಕರೆತಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *