ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ.

ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅವಿನಾಶ್​ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ. ಒಂದು ವೇಳೆ ನಾಳೆ ಅವಿನಾಶ್ ವಿಚಾರಣೆಗೆ ಹಾಜರಾಗದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್​ಗೆ ಗಡಿಪಾರು ಮಾಡುವುದಾಗಿ ನೋಟಿಸ್​ನಲ್ಲಿ ಈ ಬಗ್ಗೆ ಸಹಾಯಕ ಆಯುಕ್ತರ ಕಚೇರಿ ಉಲ್ಲೇಖ ಮಾಡಿದ್ದಾರೆ.

ನೋಟಿಸ್‌ ನಲ್ಲಿ, ಈ ಪ್ರಕರಣದಲ್ಲಿ ನೀವು ಸ್ವತಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *