ಹಿರಿಯ ನಟಿ ಶ್ರೀದೇವಿಗೆ ಗೂಗಲ್ ಡೂಡಲ್ ಗೌರವ

ಶ್ರೀದೇವಿ ಅವರ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಗೂಗಲ್ ಇಂಡಿಯಾ ಅವರಿಗೆ ಗೌರವ ಸಲ್ಲಿಸಿದೆ. ಅದರ ಭಾಗವಾಗಿ ಗೂಗಲ್ ಅವರಿಗೆ ಸಂಬಂಧಿಸಿದ ಡೂಡಲ್ ಅನ್ನು   ಸುಂದರವಾಗಿ ಮಾಡಿದೆ. ಆ ಡೂಡಲ್ ನೋಡಿದ ನೆಟಿಜನ್‌ಗಳು ಶ್ರೀದೇವಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ ಮತ್ತು ಅವರ ಮತ್ತು ಅವರ ಚಲನಚಿತ್ರಗಳನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ.

1963ರ ಆಗಸ್ಟ್ 13 ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲೇ ತಮಿಳಿನ ‘ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತು.

13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್‍ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.

ಕನ್ನಡದ ಭಕ್ತಕುಂಬಾರ, ಬಾಲಭಾರತ, ಹೆಣ್ಣು ಸಂಸಾರದ ಕಣ್ಣು, ಯಶೋಧ ಕೃಷ್ಣ, ಸಂಪೂರ್ಣ ರಾಮಯಣ, ಪ್ರಿಯಾದಲ್ಲಿ ನಟಿಸಿದ್ದರು. ರೆಬಲ್ ಸ್ಟಾರ್ ಅಂಬರೀಶ್, ರಜನಿಕಾಂತ್ ಜೊತೆ ಅಭಿನಯಿಸಿದ್ದ ಶ್ರೀದೇವಿ 80ರ ದಶಕದಲ್ಲಿ ಬಾಲಿವುಡ್ ಪ್ರಸಿದ್ಧ ಕಲಾವಿದೆಯಾಗಿ ಮಿಂಚಿದ್ದರು.

1995ರಲ್ಲಿ ಸಿನಿಮಾ ನಿರ್ಮಾಪಕ ಬೋನಿ ಕಪೂರ್ ಅವರನ್ನು ವಿವಾಹವಾದ ಬಳಿಕ 15 ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು. 2012ರಲ್ಲಿ ‘ಇಂಗ್ಲಿಷ್ ವಿಂಗ್ಲೀಷ್’ ನಲ್ಲಿ ಅಭಿನಯಿಸುವ ಮೂಲಕ ಮತ್ತೆ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದರು.

ಹಾಸ್ಯ, ಭಾವನಾತ್ಮಕ, ಸಾಹಸ, ಪ್ರೇಮ, ಪ್ರಣಯ, ನೃತ್ಯ ಹೀಗೆ ಎಲ್ಲ ರೀತಿಯ ಪಾತ್ರಗಳಲ್ಲಿ ಸೈ ಎನಿಸಿಕೊಂಡ ಶ್ರೀದೇವಿಯರ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿದಿದೆ. 2013ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಮೂಲಕ ಶ್ರೀದೇವಿ ಅವರನ್ನು ಗೌರವಿಸಿತ್ತು.

ಶ್ರೀದೇವಿ ಚಿತ್ರರಂಗದ ಅಳಿಸಲಾಗದ ಗುರುತು. ಮೂವತ್ತು ವರ್ಷಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಮಿಂಚಿದ ತಾರೆ ಶ್ರೀದೇವಿ. ಅವರು 24 ಫೆಬ್ರವರಿ 2018 ರಂದು ದುಬೈನಲ್ಲಿ ಅನುಮಾನಾಸ್ಪದವಾಗಿ ನಿಧನರಾದರು.

Font Awesome Icons

Leave a Reply

Your email address will not be published. Required fields are marked *