ಹಿರೇಮಗಳೂರು ಕಣ್ಣನ್​​​ ವೇತನ ವಾಪಸ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ

ಬೆಂಗಳೂರು:  ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್​​ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಹೇಳಿದ್ದಾರೆ.

‘ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ’ ಎಂಬ ಮುಖ್ಯಮಂತ್ರಿಗಳ ಹೇಳಿಕೆಯನ್ನು ಮುಖ್ಯಮಂತ್ರಿ ಕಚೇರಿ ಟ್ವೀಟ್ ನಲ್ಲಿ ತಿಳಿಸಿದೆ.

Font Awesome Icons

Leave a Reply

Your email address will not be published. Required fields are marked *