ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್‌ಗೆ ‘ಶೌರ್ಯ ಚಕ್ರ’ ಪ್ರಶಸ್ತಿ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ  ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಕನ್ನಡಿಗ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್‌ಗೆ  ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಲಾಗಿದೆ.  ಭಯೋತ್ಪಾದಕ ವಿರುದ್ಧ ಹೋರಾಡಿದ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ಗೌರವ ದಕ್ಕಿದೆ.
ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು ಹುತಾತ್ಮರಾಗಿದ್ದರು. 28ರ ಹರೆಯದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಆಗಿದ್ದರು.
Font Awesome Icons

Leave a Reply

Your email address will not be published. Required fields are marked *