ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹುಬ್ಬಳ್ಳಿ:  ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ ದೇಶದಲ್ಲೇ ಟಾಪ್ 5 ಗರಿಗೇರಿಸಿಕೊಂಡಿದೆ. 1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದಲ್ಲೇ ಟಾಪ್ 5 ಆಗಿರುವುದು ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ ಎನ್ನುವಂತಿದೆ.

ಕಳೆದೆರೆಡು ದಶಕಗಳಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಇಚ್ಛಾಶಕ್ತಿಯಿಂದಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಕಂಡು ಕಂಗೊಳಿಸುತ್ತಿದೆ. ದೇಶದ ಒಟ್ಟು 58 ವಿಮಾನ ನಿಲ್ದಾಣಗಳಲ್ಲಿ ಟಾಪ್ 5 ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನವನ್ನೇ ಸೆಳೆದಿದೆ.

ಮೊನ್ನೆ ಮೊನ್ನೆಯಷ್ಟೇ ಸುಮಾರು 320 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ಎರಡನೇ ಟರ್ಮಿನಲ್‌ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದು, ಎರಡೇ ವರ್ಷದಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ರೂಪುಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದನ್ನು ಸ್ಮರಿಸಬಹುದು. ಈ ಮಧ್ಯೆ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ನಡೆಸಲಾದ ಸಮೀಕ್ಷೆಯಲ್ಲಿ 5ನೇ ಸ್ಥಾನ ಪಡೆದಿರುವುದು ಹುಬ್ಬಳ್ಳಿ-ಧಾರವಾಡಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಟಾಪ್ 5 ಗೌರವಕ್ಕೆ ಪಾತ್ರವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡದಾದ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣ ಇದಾಗಿದೆ. ದೇಶದ 58 ಭಾರತೀಯ ವಿಮಾನ ನಿಲ್ದಾಣಗಳನ್ನು ಗ್ರಾಹಕ ಸಂತೃಪ್ತಿ ಸಮೀಕ್ಷೆಗೆ ಒಳಪಡಿಸಿದ್ದು, ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಒಟ್ಟು 5 ಅಂಕಕ್ಕೆ 4.95ರಷ್ಟು ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದುಕೊಂಡಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *