ಹೃದಯಾಘಾತದಿಂದ ಮಲಯಾಳಂ ಚಿತ್ರರಂಗ ನಟ ಕುಂದರ ಜಾನಿ ನಿಧನ

ಕೊಲ್ಲಂ: ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕನಾಗಿ ಮಿಂಚಿದ್ದ ನಟ ಕುಂದರ ಜಾನಿ (71) ವಿಧಿವಶರಾಗಿದ್ದಾರೆ.

ಮಂಗಳವಾರ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ ಕೊಲ್ಲಂ ಚಿನ್ನಕಡ ಎಂಬಲ್ಲಿ ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇಂದು(ಅ.18) ಬೆಳಗ್ಗೆ 9.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲ ಮಾಹಿತಿ ನೀಡಿದ್ದಾರೆ.

44 ವರ್ಷಗಳ ಚಿತ್ರರಂಗದ ಅವಧಿಯಲ್ಲಿ ಜಾನಿ ಅವರು ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮಿಳು, ತೆಲುಗು ಮತ್ತು ಕನ್ನಡ ಚಲನಚಿತ್ರಗಳು ಸೇರಿದಂತೆ ದೂರದರ್ಶನ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟನ ಅಗಲಿಕೆಗೆ ಚಿತ್ರರಂಗ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Font Awesome Icons

Leave a Reply

Your email address will not be published. Required fields are marked *