ಹೆಚ್.ಡಿಕೆ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ: ಕಾಂಗ್ರೆಸ್ ವಿರುದ್ದ ಜೆಡಿಎಸ್ ಘಟಕ ತೀವ್ರ ವಾಗ್ದಾಳಿ. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು, ಏಪ್ರಿಲ್ 10,2024 (www.justkannada.in):  ಅವರ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್. ​ಡಿ ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್  ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ದ ಅಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಘಟಕ, ಯುಗಾದಿ ಹಿಂದೂಗಳ ಹೊಸವರ್ಷ. ಯುಗಾದಿ ಹಿಂದೂಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಅಸ್ಮಿತೆ. ಈ ಹಬ್ಬದ ಮರುದಿನದ ಸಂಭ್ರಮ ಹೊಸತೊಡಕು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಕಾಂಗ್ರೆಸ್  ನಮ್ಮ ಸಂಪ್ರದಾಯ, ಸಂಸ್ಕೃತಿ, ಆಚರಣೆಯ ಮೇಲೆಯೂ ‘ಕಾಕದೃಷ್ಟಿ’ ಬೀರಿದೆ. ಬಾಡೂಟವನ್ನೂ ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ ಎಂದು ಹರಿಹಾಯ್ದಿದೆ.

ಪ್ರತೀ ಹಿಂದೂ ಮನೆಯಲ್ಲಿ ನಡೆಯುವಂತೆ ಹೆಚ್.ಡಿ ಕುಮಾರಸ್ವಾಮಿ ಅವರ ಮನೆಯಲ್ಲಿಯೂ ಹೊಸತೊಡಕು ಆಚರಣೆ ನಡೆಯುತ್ತಿದೆ. ಅದರಲ್ಲಿ ವಿಶೇಷವೇನೂ ಇಲ್ಲ. ಹೊಸತೊಡಕು ಊಟಕ್ಕೆ  ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಸಹಪಾಠಿಗಳನ್ನು ಅವರು ಆಹ್ವಾನಿಸಿದ್ದಾರೆ. ಮಾಂಸದ ಅಡುಗೆ ಈ ದಿನದ ಸಾಮಾನ್ಯ ತಿನಿಸು. ಈ ಊಟಕ್ಕೂ ಕಾಂಗ್ರೆಸ್ ಕಲ್ಲು ಹಾಕಿ ವಿಕೃತಿ ಮೆರೆದಿದೆ.

ಮತಕ್ಕಾಗಿ ಹಣ, ಹೆಂಡ, ಸೀರೆ, ಕುಕ್ಕರ್, ಫ್ರಿಡ್ಜ್, ಕೂಪನ್ ಹಂಚುವ ಸತ್ಸಂಪ್ರದಾಯ ರೂಢಿಸಿಕೊಂಡಿರುವ ಕಾಂಗ್ರೆಸ್, ಕಾವೇರಿ ಅಮ್ಮನ ಹೆಸರಿನಲ್ಲಿ ನಡೆಸಿದ ಮೇಕೆದಾಟು ಪಾದಯಾತ್ರೆಯಲ್ಲಿ ನದಿಯಂತೆ ಹರಿಸಿದ ಮಾಂಸ, ಮದ್ಯದ ಹೊಳೆಯನ್ನು ಕಾಣದವರು ಯಾರೂ ಇಲ್ಲ. ಆದರೆ, ಆ ಪಕ್ಷದ ಕಾಮಾಲೆ ಕಣ್ಣು ಹಿಂದೂಗಳ ಹಬ್ಬಗಳ ಮೇಲೆಯೇ ಬಿದ್ದಿದೆ. ಜಾತಿ, ಧರ್ಮಗಳ ತುಷ್ಟೀಕರಣ ಜಾಡ್ಯ ಕಾಂಗ್ರೆಸ್ ಪಕ್ಷವನ್ನು ಅಂಟಿಕೊಂಡಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಕಾಂಗ್ರೆಸ್ ಸೋಲಿನ ಹತಾಶೆಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳನ್ನು ಟೀಕಿಸುವ ಬರದಲ್ಲಿ ನಮ್ಮ ಹಿಂದೂ ಸಂಪ್ರದಾಯದ ಬಗ್ಗೆ ಅವಹೇಳನ ಮಾಡಿದೆ. ಅದರ ಕೊಳಕುತನ ಅದರ ಟ್ವೀಟ್ ನಲ್ಲಿ ಎದ್ದು ಕಾಣುತ್ತಿದೆ. ನಿರಂತರವಾಗಿ ಹಿಂದೂ ವಿರೋಧಿ, ದ್ರೋಹಿ ಆಗಿರುವ ಕಾಂಗ್ರೆಸ್ ಗೆ ಹೊಸತೊಡಕುಗಿಂತ ಇಫ್ತಾರ್ ಕೂಟದಲ್ಲಿಯೇ ಹೆಚ್ಚು ಪ್ರೀತಿ. ಜನ್ಮದಾರಭ್ಯ ಬಂದಿದ್ದನ್ನು ನಾವಂತೂ ಅವಹೇಳನ ಮಾಡುವುದಿಲ್ಲ ಎಂದು ಜೆಡಿಎಸ್ ಘಟಕ ಲೇವಡಿ ಮಾಡಿದೆ.

Key words: jds, H.D Kumaraswamy, Congress

Font Awesome Icons

Leave a Reply

Your email address will not be published. Required fields are marked *