ಬೆಳಗಾವಿ: ಯುವಕನೊಬ್ಬ ಹೊಸ ವರ್ಷದ ಪಾರ್ಟಿಗೆ ಹೋಗಲು ಅವಕಾಶ ನೀಡದ್ದಕ್ಕೆ ಮನ ನೊಂದು ಪ್ರಾಣ ಕಳೆದುಕೊಂಡ ಘಟನೆ ಬೆಳಗಾವಿ ಹೊರವಲಯದ ಕಣಬರ್ಗಿ ಗ್ರಾಮದಲ್ಲಿ ನಡೆದಿದೆ.
ಸಿದ್ದರಾಯ ಶಿಗಿಹಳ್ಳಿ (24) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.
ಸಿದ್ದರಾಯ ಸ್ನೇಹಿತರ ಜೊತೆಗೆ ಹೊಸ ವರ್ಷದ ಪಾರ್ಟಿ ಮಾಡಲು ಯೋಜನೆ ರೂಪಿಸಿದ್ದ. ಆದರೆ, ಪಾರ್ಟಿ ಬೇಡ, ಮನೆಯಲ್ಲಿರು ಎಂದು ಕುಟುಂಬಸ್ಥರು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821