ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಹೈಕೋರ್ಟ್ ನಕಾರ

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ ನಿರಾಕರಣೆ ಮಾಡಿದೆ.ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲುನಿರಾಕರಿಸಿದೆ. ವಕೀಲ ಎನ್​ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸಿತು.

ಅಮೃತೇಶ್ ಕೊವಿಡ್ ಹರಡುತ್ತಿರುವ ಹಿನ್ನಲೆಯಲ್ಲಿ ನಿಷೇಧ ಹೇರಬೇಕೆಂದು. ಇದನ್ನು ನ್ಯಾಯಪೀಠ ತಿರಸ್ಕರಿಸಿದೆ.ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್​ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಹೇಳಿತು. ಅಲ್ಲದೆ, ಕೋವಿಡ್ ನಿರ್ಬಂಧ ಕುರಿತ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿತು.

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಹೊಸ ವರ್ಷದ ಪಾರ್ಟಿ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ.  ಬೆಂಗಳೂರಿನಲ್ಲಿ ಅಪರಾಧ ಪೊಲೀಸರು ಅಪರಾಧ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ಇರಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *