ಬಿಗ್ಬಾಸ್ ಮನೆಯಲ್ಲಿದ್ದಾಗ ತನಿಷಾ ಕುಪ್ಪಂಡ ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಇವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿತ್ತು. ಈಗ ತನಿಷಾಗೆ ಇದೇ ಕೇಸ್ನಲ್ಲಿ ಕ್ಲೀನ್ಚಿಟ್ ಸಿಕ್ಕಿದೆ.
ಈ ಬಗ್ಗೆ ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ಕೇಸ್ ಮಾಡಿದ್ದರು. ದೂರಿನ ಆಧಾರದ ಮೇರೆಗೆ ಕುಂಬಳಗೋಡು ಪೊಲೀಸರು ಜಾತಿನಿಂದನೆ ಆರೋಪದಡಿ ತನಿಷಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು, ಇದೀಗ ತನಿಖೆ ಪ್ರಕ್ರೀಯೆ ಮುಗಿದಿದ್ದು, ತನಿಷಾ ಹಾಗೇ ಮಾತಾಡಿಲ್ಲ ಎಂದು ತಿಳಿದು ಬಂದಿದೆ.