ಅಧೀರ್ ರಂಜನ್ ಚೌಧರಿ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

ಭಾರತದಲ್ಲೂ ಕಪ್ಪು ಚರ್ಮದವರನ್ನು (ನಿಗ್ರೊಗಳು) ಹೋಲುವ ಜನರಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

“ನಮ್ಮಲ್ಲಿ ಪ್ರೋಟೋ ಆಸ್ಟ್ರಲಾಯ್ಡ್ಗಳು, ಮಂಗೋಲಾಯ್ಡ್ಗಳು ಮತ್ತು ನೆಗ್ರಿಟೊ ವರ್ಗದ ಜನರಿದ್ದಾರೆ. ನಮ್ಮ ದೇಶದ ಜನರ ಪ್ರಾದೇಶಿಕ ಲಕ್ಷಣಗಳು ವಿಭಿನ್ನವಾಗಿವೆ. ಪಿತ್ರೋಡಾ ಅವರು ನೀಡಿರುವುದು ವೈಯಕ್ತಿಕ ಅಭಿಪ್ರಾಯ. ಅದರ ಬಗ್ಗೆ ಹೆಚ್ಚು ಮಾತನಾಡುವ ಅಗತ್ಯವಿಲ್ಲ” ಎಂದು ಚೌಧರಿ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಭಾರತದಲ್ಲಿ ಹಲವಾರು ಜನಾಂಗಗಳು ಇರುವುದನ್ನು ನಮಗೆ ಶಾಲೆಗಳಲ್ಲಿ ಕಲಿಸಲಾಗಿದೆ. ಎಲ್ಲರೂ ಒಂದೇ ರೀತಿ ಕಾಣುವುದಿಲ್ಲ. ಕೆಲವರು ಕಪ್ಪು ಹಾಗೂ ಇನ್ನುಳಿದವರು ಬಿಳಿ ಬಣ್ಣದವರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಪಿತ್ರೊಡಾ ಅವರ ಹೇಳಿಕೆ ವಿವಾದಕ್ಕೆ ಇನ್ನಷ್ಟು ತುಪ್ಪ ಸುರಿದಿದೆ. ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಎಂಬ ಸ್ಯಾಮ್​ ಪಿತ್ರೊಡಾ ಹೇಳಿಕೆ ಬೆನ್ನಲ್ಲೇ ಚೌಧರಿ ತನ್ನ ಹೇಳಿಕೆ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *