ವೆಲ್ಲಿಂಗ್ಟನ್: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಫೆ.21) ಶುರುವಾಗಿದೆ. ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರಚಿನ್ ರವೀಂದ್ರ ಅಬ್ಬರಿಸಿದ್ದಾರೆ. ಈ ಮೂಲಕ ಚೊಚ್ಚಲ ಟಿ20 ಅರ್ಧಶತಕ ಪೂರೈಸಿದ್ದಾರೆ.
ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ದಾಂಡಿಗ ರಚಿನ್ ರವೀಂದ್ರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಡೆವೊನ್ ಕಾನ್ವೆ ಇನಿಂಗ್ಸ್ ಆರಂಭಿಸಿದರು.
ಕಾನ್ವೆ ಹಾಗೂ ರಚಿನ್ ರವೀಂದ್ರ ಭರ್ಜರಿ ಜೊತೆಯಾಟವಾಡಿದರು. ಆರಂಭದಲ್ಲಿ ಎಚ್ಚರಿಕೆವಾಡಿದ ರಚಿನ್ 16 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 14 ರನ್ಗಳು ಮಾತ್ರ. ಇದಾದ ಬಳಿಕ ಬ್ಯಾಟಿಂಗ್ ಗೇರ್ ಬದಲಿಸಿದ ರಚಿನ್ ಆಸೀಸ್ ಬೌಲರ್ಗಳ ಬೆಂಡೆತ್ತಲು ಶುರು ಮಾಡಿದರು. ಪರಿಣಾಮ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಇದು ಟಿ20 ಕ್ರಿಕೆಟ್ನಲ್ಲಿ ರಚಿನ್ ರವೀಂದ್ರ ಅವರ ಮೊದಲ ಅರ್ಧಶತಕ ಎಂಬುದು ವಿಶೇಷ.
ಇನ್ನು ಅರ್ಧಶತಕ ಬೆನ್ನಲ್ಲೇ ಸಿಡಿಲಬ್ಬರದ ಮುಂದುವರೆಸಿದ ರಚಿನ್ 35 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 68 ರನ್ ಚಚ್ಚಿದರು. ಮತ್ತೊಂದೆಡೆ ಕಾನ್ವೆ 46 ಎಸೆತಗಳಲ್ಲಿ 2 ಸಿಕ್ಸ್ ಮತ್ತು 5 ಫೋರ್ಗಳೊಂದಿಗೆ 63 ರನ್ಗಳ ಕೊಡುಗೆ ನೀಡಿದರು.