ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನವದೆಹಲಿ: ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ ನಾಯಕ ಜೂನ್ 2ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕಿದೆ.

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಸದ್ಯ ತಿಹಾರ್‌ ಜೈಲಿನಲ್ಲಿರುವ ಕೇಜ್ರಿವಾಲ್‌ ಲೋಕಸಭೆ ಚುನಾವಣೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠವು ಎರಡು ಭಾಗಗಳಾಗಿ ವಿಂಗಡಿಸಿದೆ. ಅವರ ಪ್ರಮುಖ ಅರ್ಜಿಯು ಕೇಂದ್ರ ತನಿಖಾ ಸಂಸ್ಥೆಯಿಂದ ತನ್ನ ಬಂಧನವನ್ನು ಪ್ರಶ್ನಿಸಿದೆ ಮತ್ತು ಅದನ್ನು “ಕಾನೂನುಬಾಹಿರ” ಎಂದು ಘೋಷಿಸುವಂತೆ ಕೋರಿದೆ.

ಎರಡನೇ ಅಂಶವು ನಡೆಯುತ್ತಿರುವ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ಮಂಜೂರು ಮಾಡಲು ಸಂಬಂಧಿಸಿದೆ. ಎರಡನೇ ಭಾಗಕ್ಕೆ ಸಂಬಂಧಿಸಿ ಇಂದು ಕೋರ್ಟ್‌ ತೀರ್ಪು ನೀಡಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದೆ. ED ಪರ ವಕೀಲ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಅರವಿಂದ ಕೇಜ್ರಿವಾಲ್‌ ಅವರಿಗೆ ಚುನಾವಣೆ ದೃಷ್ಟಿಯಿಂದ ಜಾಮೀನು ನೀಡಿದರೆ ಜನರಿಗೆ ತಪ್ಪು ಸಂದೇಶ ಹೋದಂತಾಗುತ್ತದೆ.

ಏ.9ರಂದು ಇದೇ ಪ್ರಕರಣ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌, ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ಸಮನ್ಸ್‌ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಇಡಿ ಕೊನೆಗೆ ಅವರನ್ನು ಅರೆಸ್ಟ್‌ ಮಾಡಲೇಬೇಕಾಗಿತ್ತು. ಅದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿತ್ತು. ಹೀಗಾಗಿ ಕೇಜ್ರಿವಾಲ್‌ ಕೊನೆಗೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

Font Awesome Icons

Leave a Reply

Your email address will not be published. Required fields are marked *