ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಎಂದ ಕೃಷ್ಣ ಬೈರೇಗೌಡ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: ನಾವು 18,000 ಕೋಟಿಗೆ ಮನವಿ ಸಲ್ಲಿಸಿದ್ದೆವು. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರು ಬರ ಪರಿಹಾರ ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಕೇಂದ್ರ ಸರ್ಕಾರದ ಜೊತೆ ಮಾತುಕತೆ ಮಾಡಿದ್ದೇವೆ. ಆದರೆ ಯಾವುದೇ ಅಧಿಕೃತ ದೃಢೀಕರಣ ಆಗಿಲ್ಲ. ನಾವು ಅಧಿಕೃತ ಆದೇಶದ ನೀರಿಕ್ಷೇಯಲ್ಲಿದ್ದೇವೆ ಎಂದರು.

ಅವರ ಬಳಿ ಸಮಯ ಇದ್ದಾಗ ರಾಜ್ಯಕ್ಕೆ ಪರ ಪರಿಹಾರ ಬಿಡುಗಡೆ ಅವಕಾಶ ತೆಗೆದುಕೊಂಡಿಲ್ಲ. ನಾಲ್ಕು ತಿಂಗಳು ನಾವು ನೀಡಿದ ಪತ್ರದ ಮೇಲೆ ಕೂತಿದ್ದರು. ಕರ್ನಾಟಕದ ಹಕ್ಕಿಗೆ ಯಾವುದೇ ಬೆಲೆಯನ್ನೂ ಕೊಡಲಿಲ್ಲ. ಅವರ ಕೈಯಲ್ಲಿ ತೀರ್ಮಾನ ಇದ್ದಾಗ ರಾಜ್ಯಕ್ಕೆ ಕೊಡಬಾರದು ಅನ್ನೋ ಧೋರಣೆ ಹೊಂದಿದ್ದರು.

ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಹಣ ಬಿಡುಗಡೆ ಮಾಡಬೇಕಿತ್ತು. ಬಿಡುಗಡೆ ಮಾಡದ ಕಾರಣ ನಾವು ಕೇಂದ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರುವ ಅವಶ್ಯಕತೆ ಎದುರಾಯಿತು. ಕೋರ್ಟ್‌ನಲ್ಲಿ ಎರಡು ಬಾರಿ ಹಿಯರಿಂಗ್ ಆಗಿದೆ.

ನಾವು ಸೆಪ್ಟೆಂಬರ್‌ನಲ್ಲಿ ಪರಿಹಾರದ ಮನವಿ ಕೊಟ್ಟಿದ್ದೆವು. ಕೇಂದ್ರ ತಂಡ ಬಂದು ಅಧ್ಯಯನ ಮಾಡಿ ಹೋಗಿತ್ತು. ರಾಜ್ಯದ ಮನವಿಯನ್ನು ಕೇಂದ್ರ ತಡ ಮಾಡಿತ್ತು. ಕೇಂದ್ರದ ಸಚಿವರನ್ನು ಭೇಟಿ ಮಾಡಿದರೂ ಬಿಡುಗಡೆ ಮಾಡಿರಲಿಲ್ಲ.

ನಾವು ಮನವಿ ಕೊಟ್ಟು ಏಳು ತಿಂಗಳು ಆಗಿತ್ತು. ಕರ್ನಾಟಕದ ಮನವಿಗೆ ಗೌರವ ಕೊಡಲಿಲ್ಲ. ಅದಕ್ಕಾಗಿ ನಾವು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದೆವು. ಕಾನೂನಿನ ಹೋರಾಟ ಮಾಡಬೇಕಾಯಿತು. ರಾಜ್ಯದ ಮನವಿಯನ್ನು ಕೋರ್ಟ್ ಪ್ರಶ್ನೆ ಮಾಡಲಿಲ್ಲ. ನಾವು ಸಮಯಕ್ಕೆ ಸರಿಯಾಗಿ ಎಲ್ಲಾ ಮನವಿ ಮಾಡಿದೆವು.

ಕೇಂದ್ರದ ವಕೀಲರು ಮನವಿ ಮಾಡಿದರು. ನಾವು ನಿರ್ಧಾರ ಮಾಡಲು ಸಮಯ ಬೇಕು ಎಂದಿದ್ದರು. ನಮಗೆ ಹೋರಾಟದ ಮೂಲಕ ಬರ ಪರಿಹಾರ ಹಣ ಬಂದಿದೆ. ನಮಗೆ ಕಾನೂನು ಬದ್ಧವಾಗಿ ಬಂದಿರುವ ಹಣ ಇದು ಎಂದು ಹೇಳಿದರು

Font Awesome Icons

Leave a Reply

Your email address will not be published. Required fields are marked *