ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಕಳೆದ ಎರಡ್ಮೂರು ದಿನಗಳಿಂದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಅಂತೆಯೇ ಆರ್.ಅಶೋಕ್ ನೇತೃತ್ವದಲ್ಲಿ ಹಬ್ಬಳ್ಳಿಯಲ್ಲಿ ಜನವರಿ 3 ರಂದು ಬೃಹತ್ ಪ್ರತಿಭಟನೆ ನಡೆದಿತ್ತು.
ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಘೋಷಣೆ, ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿಯ 42 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಧಾರವಾಡ ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಪಾಲಿಕೆ ವಿಪಕ್ಷ ನಾಯಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಇದೆ.
ಭಾಷಣದ ವೇಳೆ ‘ಸಿದ್ದರಾಮಯ್ಯ ಅಲ್ಲ, ಸಿದ್ದು ಮುಲ್ಲಾ’, ‘ಸಿದ್ದರಾಮಯ್ಯ ಲುಚ್ಚಾ’ ಎಂಬ ಪದ ಬಳಕೆ ಮಾಡಿ ಬಿಜೆಪಿಗರು ಘೋಷಣೆ ಕೂಗಿದ್ದಾರೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯ ಮಾನಹಾನಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.