ಅ.10ರಂದು ಮಣಿಪಾಲದಲ್ಲಿ ಮಾನಸಿಕ ಆರೋಗ್ಯ ಜಾಗೃತಿಗಾಗಿ ಮ್ಯಾರಥಾನ್ ಓಟ

ಉಡುಪಿ: ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ಯ ಅಂಗವಾಗಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ವಿದ್ಯಾರ್ಥಿ ವ್ಯವಹಾರಗಳ ವಿಭಾಗವು ಅ.7ರಿಂದ 12ರವರೆಗೆ ಮಾನಸಿಕ ಆರೋಗ್ಯ ಜಾಗೃತಿ ಸಪ್ತಾಹವನ್ನು ಆಚರಿಸುತ್ತಿದೆ ಎಂದು ಮಾಹೆಯ ಕುಲಪತಿ ಲೆ.ಜ. (ಡಾ.) ಎಂ.ಡಿ.ವೆಂಕಟೇಶ್ ತಿಳಿಸಿದ್ದಾರೆ.

ಮಣಿಪಾಲದ ಮಾಹೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಮಾನಸಿಕ ಆರೋಗ್ಯ ಜಾಗೃತಿ ಸಪ್ತಾಹದಲ್ಲಿ ಉದ್ಯೋಗ ಸ್ಥಳಗಳಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಬಗ್ಗೆ ವಿಶೇಷ ಜಾಗೃತಿಯನ್ನು ಮೂಡಿಸಲಾಗುತ್ತದೆ ಎಂದರು.ಇದರ ಅಂಗವಾಗಿ ಅ.10ರಂದು ಮಣಿಪಾಲದಲ್ಲಿ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿದೆ. ಉಡುಪಿ ಆಸುಪಾಸಿನ ಶಾಲಾ-ಕಾಲೇಜು ಗಳ ವಿದ್ಯಾರ್ಥಿಗಳಿಗೆ, ಪ್ರಾದ್ಯಾಪಕರು, ಮಾಹೆ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರು ಇದರಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ 1000ಕ್ಕೂ ಅಧಿಕ ಮಂದಿ ಮ್ಯಾರಥಾನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಎಂಐಟಿಯ ಸಿಎಸ್‌ಇ ವಿಭಾಗದ ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ನಿರ್ದೇಶಕಿ ಡಾ.ಗೀತಾ ಮಯ್ಯ ತಿಳಿಸಿದರು.
ಎರಡು ವಿಭಾಗಗಳಲ್ಲಿ ಐದು ಕಿ.ಮೀ. ಹಾಗೂ 3 ಕಿ.ಮೀ. ದೂರದ ಈ ಮ್ಯಾರಥಾನ್ ಸ್ಪರ್ಧೆಗಳು ಸಂಜೆ 5ಗಂಟೆಗೆ ಪ್ರಾರಂಭಗೊಳ್ಳಲಿದೆ. ಮಾಹೆ ಎಜ್ಯು ಎದುರು ಪ್ರಾರಂಭಗೊಳ್ಳುವ ಈ ಮ್ಯಾರಥಾನ್ ಮಣಿಪಾಲದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಅಲ್ಲೇ ಮುಕ್ತಾಯಗೊಳ್ಳಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ ಎಂದರು.

ಮರುದಿನ ಅ.11ರಂದು ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿದೆ. ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಾಗಾರದಲ್ಲಿ ತಜ್ಞ ವೈದ್ಯರು, ಮಾನಸಿಕ ತಜ್ಞರು ಮಾನಸಿಕ ಆರೋಗ್ಯದ ಕುರಿತಂತೆ ಜಾಗೃತಿ ಮೂಡಿಸುವ ಅಂಶಗಳನ್ನು ತಿಳಿಸಲಿದ್ದಾರೆ ಎಂದರು.ಮಾಹೆಯ ಪ್ರೊ ವೈಸ್ ಚಾನ್ಸಲರ್ ಡಾ.ಶರತ್ ರಾವ್, ಮಾಹೆ ಮಣಿಪಾಲದ ಮುಖ್ಯ ಕಾರ್ಯ ನಿರ್ವಹಣಾದಿಕಾರಿ ಡಾ.ರವಿರಾಜ ಎನ್.ಎಸ್., ಹಣಕಾಸು ನಿರ್ದೇಶಕಿ ಸರಸ್ವತಿ ಕೆ.ಭಟ್, ಡಾ.ರಾಘವೇಂದ್ರ, ಡಾ.ಅರವಿಂದ ಪಾಂಡೆ ಮುಂತಾದವರು ಉಪಸ್ಥಿತರಿದ್ದರು

Font Awesome Icons

Leave a Reply

Your email address will not be published. Required fields are marked *