ಆಕ್ರೋಶ ವ್ಯಕ್ತಪಡಿಸಿದ ನಟ ಧ್ರುವ ಸರ್ಜಾ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: ನೇಹಾ ಹಿರೇಮಠ್ ಅವರ ಹತ್ಯೆಗೆ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು ಈಗ ಚಿತ್ರರಂಗದ ನಟರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಟ ಧ್ರುವ ಸರ್ಜಾ  ಅವರು ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ಅವರು ನೇಹಾ ಹಿರೇಮಠ್​  ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.

‘ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್​ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಧ್ರುವ ಸರ್ಜಾ   ‘ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಘಟನೆಯ ಕುರಿತಂತೆ ಧ್ರುವ ಸರ್ಜಾ ಪೋಸ್ಟ್​ ಮಾಡಿರುವುದಕ್ಕೆ ಅಭಿಮಾನಿಗಳು ಪ್ರಶಂಸೆ ಸೂಚಿಸಿದ್ದಾರೆ.

‘ತಮ್ಮ ಸಾಮಾಜಿಕ ಕಾಳಜಿಗೆ ಧನ್ಯವಾದಗಳು. ಅಪರಾಧಿಗೆ ಇನ್ನೂ ಜೀವಂತವಾಗಿ ಇಟ್ಟಿರುವುದೇ ಒಂದು ವಿಪರ್ಯಾಸ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಕೊಲೆ ಮಾಡಿದ್ದಕ್ಕೆ ವಿಡಿಯೋ ಇದೆ. ಸಾಕ್ಷಿ ಇನ್ನೇನು ಬೇಕು’ ಎಂದು ‘ಎಕ್ಸ್​’ ಬಳಕೆದಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *