ಆಯ ತಪ್ಪಿ ರಸ್ತೆಗೆ ಬಿದ್ದ ವ್ಯಕ್ತಿ ಮೇಲೆ ಹರಿದ ಬಸ್: ಬೈಕ್ ಸವಾರ ಸಾವು

ಬೆಂಗಳೂರು: ನಾಗರಬಾವಿ ಹೊರ ವರ್ತುಲ ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಲ್ಲಿ ಹೋಗುವಾಗ ಆಯ ತಪ್ಪಿ ರಸ್ತೆಗೆ ಬಿದ್ದಾಗ ಖಾಸಗಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ದುರ್ದೈವಿ ಹೆಗ್ಗನಹಳ್ಳಿ ನಿವಾಸಿ ಮುರಳಿ (40) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಮೃತನ ಸ್ನೇಹಿತ ರಾಜು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸಂಬಂಧ ಖಾಸಗಿ ಬಸ್ ಚಾಲಕನನ್ನು ಜ್ಞಾನಭಾರತಿ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ದುರ್ದೈವಿ ಪೇಂಟರ್‌ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *