ಆರು ಜನರ ದುರ್ಮರಣ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಉತ್ತರ ಪ್ರದೇಶ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

ಜಮಾಲ್‌ಪುರ ಗ್ರಾಮದ ಬಳಿಯ ಹರ್ದೋಯಿ-ಉನ್ನಾವೋ ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಬಸ್‌ನ ಒಂದು ಬದಿ ಛಿದ್ರಗೊಂಡು ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಆರು ಜನ ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಮೊದಲು ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರ ಮತ್ತು ಉನ್ನಾವೊಗೆ ಕಳುಹಿಸಲಾಗಿದೆ.

ಟ್ರಕ್ ಚಾಲಕನನ್ನು ಬಂಧಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *